Webdunia - Bharat's app for daily news and videos

Install App

ರಾಜ್ಯದ ಕೆಲ ಸಮಸ್ಯೆ ಮುಂದಿಟ್ಟು ನಿತಿನ್ ಗಡ್ಕರಿಯನ್ನು ಭೇಟಿಯಾದ ಕುಮಾರಸ್ವಾಮಿಗೆ ಸಿಕ್ತು ಭಾರೀ ಭರವಸೆ

Sampriya
ಬುಧವಾರ, 8 ಜನವರಿ 2025 (18:11 IST)
Photo Courtesy X
ನವದೆಹಲಿ: ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ  ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಈ ವೇಳೆ ಗಡ್ಕರಿ ಬಳಿ ಹಲವು ಮನವಿಗಳನ್ನು ಮಾಡಿದರು. ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿಯವರ ನಿವಾಸದಲ್ಲಿ ಭೇಟಿಯಾದ ಕುಮಾರಸ್ವಾಮಿ ಗಡ್ಕರಿಯೊಂದಿಗೆ ಮಾತುಕತೆ ನಡೆಸಿದರು.

ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಗಡ್ಕರಿ ಅವರು ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಭರವಸೆ ನೀಡಿದರು.

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜೊತೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದರು. ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವರು, ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್‌ ಅಭಿವೃದ್ಧಿಗೆ ಕುಮಾರಸ್ವಾಮಿ ಮನವಿ ಮಾಡಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments