ನವದಿಲ್ಲಿ : ಏರ್ ಸೆಲ್- ಮ್ಯಾಟ್ರಿಕ್ಸ್ ಹಗರಣ ಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರಿಗೆ ಇದೀಗ ದೆಹಲಿ ಕೋರ್ಟ್ ತಾತ್ಕಲಿಕ ರಿಲೀಫ್ ನೀಡಿದೆ.
ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಈ ಹಗರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜೂನ್ 5 ರಂದು ಚಿದಂಬರಂ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದು, ಅಲ್ಲಿಯವರೆಗೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಸೂಚಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ