Webdunia - Bharat's app for daily news and videos

Install App

ಲಂಡನ್‌ನಲ್ಲಿ ಹೋಟೆಲ್‌ನಲ್ಲಿ ತಂಗಿದ್ದ ಏರ್ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ

Sampriya
ಭಾನುವಾರ, 18 ಆಗಸ್ಟ್ 2024 (11:54 IST)
Photo Courtesy X
ನವದೆಹಲಿ: ಲಂಡನ್‌ನ ಹೊಟೇಲ್‌ನಲ್ಲಿ ತಂಗಿದ್ದ ಏರ್ ಇಂಡಿಯಾ ಕ್ಯಾಬಿನ್ ಮಹಿಳಾ ಸಿಬ್ಬಂದಿಯೊಬ್ಬರ ಕೋಣೆಗೆ ನುಗ್ಗಿದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

ಲಂಡನ್‌ನ ಹೀಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ ಎಂದು ಏರ್ ಇಂಡಿಯಾ ಮೂಲಗಳು ತಿಳಿದುಬಂದಿದೆ. ಮಹಿಳೆ ತನ್ನ ಕೋಣೆಯಲ್ಲಿದ್ದಾಗ ಏಕಾಏಕಿ ಒಳಗೆ ನುಗ್ಗಿದ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಲ್ಲೆ ಮಾಡಿದ್ದಾನೆ. ಈ ವೇಳೆ ಸಂತ್ರಸ್ತೆ ಜೋರಾಗಿ ಕಿರುಚಿದ್ದಾಳೆ. ತಕ್ಷಣಕ್ಕೆ ಅಲ್ಲಿಗೆ ಬಂದವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಲ್ಲೆಗೊಳಗಾದ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು.  ಈ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಹೋಟೆಲ್ ಆಡಳಿತ ಮಂಡಳಿಯೊಂದಿಗೂ ತನಿಖೆ ನಡೆಸಲಾಗುತ್ತಿದೆ.

ಆ ವ್ಯಕ್ತಿ ನಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡುತ್ತಿದ್ದಂತೆ ಅವರು ಕೂಗಿಕೊಂಡಿದ್ದಾರೆ. ತಕ್ಷಣಕ್ಕೆ ಕೆಲವರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ. ಲಂಡನ್ ಹೋಟೆಲ್‌ನಲ್ಲಿ ಅಸಮರ್ಪಕ ಭದ್ರತೆ, ಬಗ್ಗೆ ಈ ಹಿಂದೆಯೂ ದೂರುಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ