Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ; 300ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Delhi Air Pollution

Sampriya

ನವದೆಹಲಿ , ಗುರುವಾರ, 14 ನವೆಂಬರ್ 2024 (15:11 IST)
Photo Courtesy X
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಮುಂದುವರಿದಿದೆ. ಇಂದು ಮುಂಜಾನೆ AQI 452ರ ಗಡಿ ದಾಟಿದ್ದು ದಟ್ಟಮಂಜಿನಂತಹ ಹೊಗೆ ಆಚರಿಸಿಕೊಂಡಿತ್ತು.

ಫ್ಲೈಟ್‌ರಾಡಾರ್ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಡಿಮೆಯಾಗಿದೆ. ಇದರಿಂದಾಗಿ 300 ಅಧಿಕ ವಿಮಾನಗಳು ವಿಳಂಬವಾಗಿವೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ರಾಜಧಾನಿ ಪ್ರದೇಶದ ಹಲವಾರು ಪ್ರದೇಶಗಳಲ್ಲಿ AQI 450 ಕ್ಕಿಂತ ಹೆಚ್ಚು ದಾಖಲಾಗಿದೆ. ಆನಂದ್ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್ಪುರಿ, ಮುಂಡ್ಕಾ, ನಜಾಫ್ಗಢ್, ಲಜಪತ್ ನಗರ, ಪಟ್ಪರ್ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್, ಮತ್ತು ವಜೀರ್‌ಪುರ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಸೇರಿವೆ.

ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ. ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್‌ನಿಂದ ದೆಹಲಿಗೆ ಹಿಂದಿರುಗಿದ ಬಗ್ಗೆ ಮಾತನಾಡಿ, ದೆಹಲಿಗೆ ಆಗಮಿಸಿದ್ದು `ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದ ಅನುಭವ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕನ ಎಡಗಣ್ಣಿನ ಸಮಸ್ಯೆಗೆ ಬಲಗಣ್ಣಿಗೆ ಶಸ್ತ್ರಚಿಕಿತ್ಸೆ: ನೋಯ್ಡಾದ ವೈದ್ಯರ ಎಡವಟ್ಟಿಗೆ ಆಕ್ರೋಶ