ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಎರಡು ದಿನ ಬಾಕಿ ಇರುವಾಗಲೇ ವಾರಣಾಸಿಯ ಮತ ಎಣಿಕೆ ಕೇಂದ್ರದಿಂದ ಇವಿಎಂಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಸಾಗಿಸಲಾಗುತ್ತಿದೆ,
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ. ಮತ ಎಣಿಕೆ ಕೇಂದ್ರದಿಂದ ಇವಿಎಂ ತೆಗೆದುಕೊಂಡು ಹೋಗಿರುವ ಸಂಬಂಧ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ವಾರಣಾಸಿಯ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಮತಗಟ್ಟೆಗಳಿಂದ ಇವಿಎಂ ಸಾಗಿಸುತ್ತಿದ್ದಾರೆ. ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲುತ್ತದೆ. ಹೀಗಾಗಿ ಬಿಜೆಪಿಗೆ ಭಯವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಇವಿಎಂಗಳನ್ನು ಟ್ಯಾಂಪರಿಂಗ್ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.