Select Your Language

Notifications

webdunia
webdunia
webdunia
webdunia

ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ

ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ
ನವದೆಹಲಿ , ಮಂಗಳವಾರ, 23 ಮೇ 2023 (11:13 IST)
ನವದೆಹಲಿ : ಜನನ ಹಾಗೂ ಮರಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಮತದಾರರ ಪಟ್ಟಿಗೆ ಜೋಡಿಸಲು ಸಂಸತ್ತಿನಲ್ಲಿ ಮಸೂದೆಯನ್ನು ತರಲು ಸರ್ಕಾರ ಯೋಜಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
 
ಸೋಮವಾರ ಭಾರತೀಯ ರಿಜಿಸ್ಟ್ರಾರ್ ಜನರಲ್ ಹಾಗೂ ಜನಗಣತಿ ಆಯುಕ್ತರ ಕಚೇರಿ ‘ಜಂಗಣ್ಣನ ಭವನ’ವನ್ನು ಉದ್ಘಾಟಿಸಿದ ಶಾ ಬಳಿಕ ಮಾತನಾಡಿ, ವ್ಯಕ್ತಿಯ ಜನನ ಹಾಗೂ ಮರಣದ ನೋಂದಣಿಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಈ ಪ್ರಕ್ರಿಯೆಯ ಅಡಿಯಲ್ಲಿ ಒಬ್ಬ ವ್ಯಕ್ತಿಗೆ 18 ವಯಸ್ಸು ತುಂಬಿದಾಗ ಆತನ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸ್ವಯಂಚಾಲಿತವಾಗಿ ಸೇರಿಸಲಾಗುತ್ತದೆ.

ಅದೇ ರೀತಿ ಒಬ್ಬ ವ್ಯಕ್ತಿ ಸತ್ತಾಗ ಆ ಮಾಹಿತಿ ಸ್ವಯಂಚಾಲಿತವಾಗಿ ಚುನಾವಣಾ ಆಯೋಗಕ್ಕೂ ಹೋಗಲಿದ್ದು, ಆತನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಲಾಗುತ್ತದೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಖಾಸಗಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡದಿದ್ದರೆ ಲೈಸೆನ್ಸ್ ರದ್ದು : ಪರಮೇಶ್ವರ್ ಎಚ್ಚರಿಕೆ