ರಾಜ್ಯದ ಬಿಜೆಪಿ ನಾಯಕರಿಗೆ ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬುಲಾವ್ ನೀಡಿದ್ದು, ನಾಳೆ ಕೋರ್ ಕಮಿಟಿ ಸದಸ್ಯರು ದೆಹಲಿಗೆ ತೆರಳಿ ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತರಪ್ರದೇಶದ ಚುನಾವಣೆಯ ನಂತರ ಬಿಜೆಪಿ ಹೈಕಮಾಂಡ್ ಕಣ್ಣು ಕರ್ನಾಟಕದ ಮೇಲಿದ್ದು, ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಹಿಟ್ ಆರ್ ಗೆಟ್ ರೀತಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ರಣತಂತ್ರ ರೂಪಿಸಲಿದೆ ಎನ್ನಲಾಗಿದೆ.
ನಾಳೆ ಸಂಜೆ 6 ಗಂಟೆಗೆ ಅನಂತ್ ಕುಮಾರ್ ನಿವಾಸದಲ್ಲಿ ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು ರಾಷ್ಟ್ರ ಮತ್ತು ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಬಿಜೆಪಿ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಡಿವಿಎಸ್ ಸೇರಿದಂತೆ ಅನೇಕ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.