ಅಂತಾರಾಷ್ಟ್ರೀಯ ವೇದಿಕೆಯ ಮೇಲೆ ವಂಶಪಾರಂಪರೆ ರಾಜಕೀಯದ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
"ಬಿಜೆಪಿ ಕಾರ್ಯಕ್ಷಮತೆಯ ರಾಜಕೀಯದಲ್ಲಿ ನಂಬಿಕೆ ಹೊಂದಿದ್ದರೇ ಕಾಂಗ್ರೆಸ್ ರಾಜಮನೆತನದ ಮತ್ತು ವಂಶಪರಂಪರೆ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದರು.
13 ಮುಖ್ಯಮಂತ್ರಿಗಳು 2500 ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಪಾಲ್ಗೊಂಡಿದ್ದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಮಂತ್ರಿ, ಉಪರಾಷ್ಟ್ರಪತಿ, ರಾಷ್ಟ್ರಪತಿ ತಮ್ಮ ಸಾಧನೆಯಿಂದಾಗಿ ಇಂತಹ ಉನ್ನತ ಸ್ಥಾನಕ್ಕೆ ಏರಿದ್ದಾರೆಯೇ ಹೊರತು ವಂಶಪರಂಪರ ರಾಜಕೀಯದಿಂದಲ್ಲ ಎಂದು ಗುಡುಗಿದರು.
ರಾಹುಲ್ ಗಾಂಧಿ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ದೇಶದ ಬಗ್ಗೆ ಅಪಹಾಸ್ಯವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.