ಆನಂದಿಬೆನ್ ಉತ್ತರಾಧಿಕಾರಿಯಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಆಯ್ಕೆಯಾಗಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿರುವ ಬಿಜೆಪಿ, ಶಾ ಗುಜರಾತ್ ಸಿಎಂ ಸ್ಥಾನದ ರೇಸ್‌ನಲ್ಲಿ ಶಾ ಇಲ್ಲ ಎಂದು ಸ್ಪಷ್ಟ ಪಡಿಸಿದೆ.
ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸುವುದಿಲ್ಲ. ಪಕ್ಷ ಅವರನ್ನು ರಾಷ್ಟ್ರೀಯ ಮಟ್ಟದಲ್ಲೇ ಇಟ್ಟುಕೊಳ್ಳಲು ಬಯಸುತ್ತದೆ ಎಂದು ಸಂಸದೀಯ ಮಂಡಳಿ ಸಭೆ ಬಳಿಕ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಮೂಲಗಳ ಪ್ರಕಾರ ಗುಜರಾತ್ ಚುನಾವಣೆ ಉತ್ತರ ಪ್ರದೇಶಕ್ಕಿಂತ ದೊಡ್ಡ ಚುನಾವಣಾ ಕಾಳಗವಾಗಿದ್ದು,ರಾಜ್ಯದಲ್ಲಿ ಕಳೆದುಕೊಳ್ಳುತ್ತಿರುವ ಹಿಡಿತವನ್ನು ಮರಳಿ ಗಳಿಸಲು ಪಕ್ಷದ ವರಿಷ್ಠರು ಕಾರ್ಯಪ್ರವೃತ್ತರಾಗಬೇಕು. ಇದನ್ನು ಗಮನದಲ್ಲಿರಿಸಿಕೊಂಡು ಪ್ರಬಲ ಮತ್ತು ನಿರ್ಣಾಯಕ ನಾಯಕತ್ವದ ವ್ಯಕ್ತಿಯನ್ನು ಸಿಎಂ ಆಗಿ ಆಯ್ಕೆ ಮಾಡಬೇಕು ಎಂದು ಸಂಘ ಬಿಜೆಪಿಗೆ ಸಲಹೆ ನೀಡಿದೆ.
ಅಮಿತ್ ಶಾ ನೇತೃತ್ವದಲ್ಲಿ ಗುಜರಾತ್‌ಗೆ ತೆರಳಲಿರುವ ನಿಯೋಗ ಅಲ್ಲಿನ ಶಾಸಕರ ಜತೆ ಚರ್ಚೆ ನಡೆಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಲಿದೆ. ಆದರೆ ಕೊನೆಯ ನಿರ್ಧಾರ ಪ್ರಧಾನಿಯವರದ್ದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.