ನವದೆಹಲಿ: ನಮ್ಮ ಸರ್ಕಾರಕ್ಕೆ ಭ್ರಷ್ಟಾಚಾರದ ಕಳಂಕವಿಲ್ಲ ಎಂದು ಎದೆತಟ್ಟಿಕೊಳ್ಳುತ್ತಿದ್ದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಂತಹ ಆರೋಪವೊಂದನ್ನು ವೆಬ್ ವಾಹಿನಿಯೊಂದು ಮಾಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರ ಕಂಪನಿಯ ವಹಿವಾಟು ಒಂದೇ ವರ್ಷದಲ್ಲಿ 16 ಸಾವಿರ ಪಟ್ಟು ಹೆಚ್ಚಾಗಿದೆ ಎಂಬ ಆರೋಪ ಕೇಳಿಬಂದಿದೆ. ವೆಬ್ ವಾಹಿನಿಯೊಂದು ಮಾಡಿರುವ ಆರೋಪವು ವಿರೋಧ ಪಕ್ಷಗಳಾದ ಕಾಂಗ್ರೆಸ್, ಎಎಪಿ ಮತ್ತು ಸಿಪಿಐ ಕೈಗೆ ಅಸ್ತ್ರ ಸಿಕ್ಕಂತಾಗಿದೆ.
ನಷ್ಟದಲ್ಲಿ ಶಾ ಪುತ್ರನ ಕಂಪನಿ ಆದಾಯ ಒಂದೇ ವರ್ಷದಲ್ಲಿ ಇಷ್ಟು ಹೆಚ್ಚಾಗಿದ್ದು ಹೇಗೆ ಎಂದು ವಿರೋಧ ಪಕ್ಷಗಳು ಪ್ರಶ್ನಿಸಿವೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಜಯ್ ಶಾ ನನ್ನ ಕಂಪನಿ ವ್ಯವಹಾರಗಳೆಲ್ಲವೂ ಕಾನೂನು ಬದ್ಧವಾಗಿದೆ. ಸುಳ್ಳು ಆರೋಪ ಹೊರಿಸಿರುವ ವೆಬ್ ವಾಹಿನಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ