ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಜಾಮೀನನ್ನು ಪ್ರಶ್ನಿಸಿ,
ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ದೇಶಮುಖ್ ಅವರಿಗೆ ನೀಡಲಾದ ಜಾಮೀನು ಅಕ್ಟೋಬರ್ 13ಕ್ಕೆ ಜಾರಿಗೆ ಬರಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠದ ಮುಂದೆ ಹಣಕಾಸು ತನಿಖಾ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರಕರಣವನ್ನು ಪ್ರಸ್ತಾಪಿಸಿದರು.
ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಪ್ರಕರಣವನ್ನು ನಾಳೆ ಪಟ್ಟಿ ಮಾಡುವಂತೆ ಪೀಠವು ಸೂಚಿಸಿದೆ.