ತ್ರಿವಳಿ ತಲಾಕ್ ವಿಧೇಯಕ ಅಂಗೀಕಾರಕ್ಕೆ ಅಸಹಕಾರ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ಮುಸ್ಲಿಂ ಮಹಿಳೆಯರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಆರೋಪಿಸಿದ್ದಾರೆ.
ಸೆಲೆಕ್ಟ್ ಸಮಿತಿಗೆ ವಿಧೇಯಕ ಕಳಿಸಬೇಕೆಂಬ ಕಾಂಗ್ರೆಸ್ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿರುವ ಅನಂತ್ ಕುಮಾರ್, ದಾರಿ ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಈ ರೀತಿಯ ಬೇಡಿಕೆ ಮುಂದಿಟ್ಟಿದೆ ಎಂದಿದ್ದಾರೆ.
ಪ್ರಸಕ್ತ ಸಾಲಿನ ಅಧಿವೇಶನದಲ್ಲಿ ತ್ರಿವಳಿ ತಲಾಖ್ ವಿಧೇಯಕ ಅಂಗೀಕಾರವಾಗದ್ದಕ್ಕೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧೇಯಕಕ್ಕೆ ಕಾಂಗ್ರೆಸ್ ವಿರೋಧ ಪಡಿಸಿ ಮಹಿಳೆಯರಿಗೆ ಅನ್ಯಾಯ ಎಸಗಿದೆ ಎಂದು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.