ನವದೆಹಲಿ : ಇಂದು ಸುಪ್ರೀಂಕೋರ್ಟ್ ನಲ್ಲಿ ಅನರ್ಹ ಶಾಸಕರ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಸುಪ್ರೀಂಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿಹಿಡಿಯುವುದರ ಮೂಲಕ ಅನರ್ಹ ಶಾಸಕರಿಗೆ ಬಿಗ್ ಶಾಕ್ ನೀಡಿದೆ.
ಪಕ್ಷಕ್ಕೆ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾದ 17 ಮಂದಿ ಶಾಸಕರನ್ನು ಸ್ಪೀಕರ್ ಅನರ್ಹರೆಂದು ಆದೇಶಿಸಿದ್ದರು. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, 17 ಅನರ್ಹ ಶಾಸಕರ ಅನರ್ಹತೆ ಫಿಕ್ಸ್ ಎಂದು ಹೇಳುವುದರ ಮೂಲಕ ಕೋರ್ಟ್ ಸ್ಪೀಕರ್ ಆದೇಶವನ್ನು ಎತ್ತಿಹಿಡಿದಿದ್ದಾರೆ. ಅಲ್ಲದೇ ಅನರ್ಹರಿಗೆ ಉಪಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದ ಕೋರ್ಟ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿ ಕೊಟ್ಟಿದೆ.