Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಣಜಿ : ಗೋವಾ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ.
ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಪಕ್ಷವನ್ನು ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಈಗ ಪರ್ಸೆಕರ್ ಅವರಿಗೂ ಟಿಕೆಟ್ ನಿರಾಕರಿಸಿದ್ದು, ಅಧ್ಯಕ್ಷ ಸದಾನಂದ್ ತಾನಾವ್ಡೆ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಗೋವಾದ ಪ್ರದೇಶದ ಪ್ರಾಥಮಿಕ ಸದಸ್ಯತ್ವಕ್ಕೆ ನಾನು ಈ ಮೂಲಕ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸುತ್ತಿದ್ದೇನೆ.
ನನ್ನ ರಾಜೀನಾಮೆಯನ್ನು ಈ ಕ್ಷಣವೇ ಅಗೀಕರಿಸಬೇಕು ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳಿಂದ ನನ್ನನ್ನು ತಕ್ಷಣವೇ ಮುಕ್ತಗೊಳಿಸಬೇಕೆಂದು ಪರ್ಸೆಕರ್ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.