ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಲಾಢ್ಯ ಕೋಟೆಯಾದ ಗುಜರಾತ್‌ನಲ್ಲಿ ಬಿಜೆಪಿ, ಶತಾಯ ಗತಾಯ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿ ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಎನ್ನುವ ಲೆಕ್ಕಾಚಾರ ಉಲ್ಟಾ ಹೊಡೆಯುತ್ತಿದೆ.
ಬಿಜೆಪಿಯ ಪ್ರಬಲ ಹಿರಿಯ ನಾಯಕ ಎಂದು ಪರಿಗಣಿಸಲಾಗಿರುವ ಜೇಟಾಭಾಯ್ ಸೋಲಂಕಿ ಪಕ್ಷಕ್ಕೆ ರಾಜೀನಾಮೆ ನೀಡಿರುವುದು ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಆಘಾತ ತಂದಿದೆ
ಬಿಜೆಪಿ ಪಕ್ಷದಲ್ಲಿ ದಲಿತರನ್ನು ಅತ್ಯಾಚಾರಿಗಳು ಎನ್ನುವಂತೆ ನೋಡಿಕೊಳ್ಳಲಾಗುತ್ತಿದೆ. ದಲಿತರಿಗೆ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಗೌರವವಿಲ್ಲ. ಸರ್ವಾಧಿಕಾರಿ ಧೋರಣೆ ವಿರೋಧಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದ ಸಂಪೂರ್ಣ ಗಮನ ಗುಜರಾತ್ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದ್ದರಿಂದ ಪ್ರತಿಷ್ಛೆಯನ್ನು ಉಳಿಸಿಕೊಳ್ಳಲು ಮೋದಿ-ಅಮಿತ್ ಶಾ ರಣತಂತ್ರ ರೂಪಿಸುತ್ತಿದ್ದಾರೆ. ಗುಜರಾತ್ ರಾಜ್ಯದ ಫಲಿತಾಂಶ ಕರ್ನಾಟಕ ರಾಜ್ಯದ ಮೇಲೆ ಬೀರುವ ಸಾಧ್ಯತೆಗಳಿರುವುದರಿಂದ ಗೆಲ್ಲಲು ಅಗತ್ಯವಾದ ಎಲ್ಲಾ ಅಸ್ತ್ರಗಳನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ
ದಲಿತರ ಪರವಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಬಿಜೆಪಿ ಸರಕಾರ ವಿಫಲವಾಗಿದೆ. ಬಿಜೆಪಿ ದಲಿತ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ. ಸೋಲಂಕಿ ಚುನಾವಣೆಯಲ್ಲಿ ಸ್ವತಂತ್ರ ಆಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಅಥವಾ ಬೇರೆ ಪಕ್ಷವನ್ನು ಸೇರಲಿದ್ದಾರೆ ಎಂಬ ಮಾಹಿತಿ ಇದೂವರೆಗೂ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.