Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹಕ್ಕಿ ಜ್ವರದ ಆತಂಕ: ಕೋಳಿ ನಾಶ ಮಾಡಲು ಸರ್ಕಾರ ಆದೇಶ

ಹಕ್ಕಿ ಜ್ವರದ ಆತಂಕ: ಕೋಳಿ ನಾಶ ಮಾಡಲು ಸರ್ಕಾರ ಆದೇಶ
ತಿರುವನಂತಪುರಂ , ಶುಕ್ರವಾರ, 10 ಡಿಸೆಂಬರ್ 2021 (15:53 IST)
ತಿರುವನಂತಪುರಂ : ಕೇರಳದ ಆಲಪ್ಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ಪ್ರಕರಣ ದೃಢಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಆಲಪ್ಪುಳ ಜಿಲ್ಲೆಯ ಕೋಟ್ಟನಾಡ್ನಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಮತ್ತು ಸ್ಥಳೀಯ ಹಕ್ಕಿಗಳು ಸತ್ತ ಹಿನ್ನೆಲೆ ಅಧಿಕಾರಿಗಳು ಭೋಪಾಲ್ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ಗೆ ಮಾದರಿಗಳನ್ನು ಕಳುಹಿಸಿದ್ದರು. ಇದೀಗ ಹಕ್ಕಿ ಜ್ವರ ಪ್ರಕರಣಗಳು ದೃಢಪಟ್ಟಿದೆ.

ಹೀಗಾಗಿ ಹಕ್ಕಿ ಜ್ವರ ಹರಡದಂತೆ ರೋಗ ಪೀಡಿತ ಪ್ರದೇಶದಲ್ಲಿರುವ ಬಾತುಕೋಳಿಗಳನ್ನು ಕೊಲ್ಲಲು ಪಶುವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ. ಇದೀಗ ಪ್ರಕರಣ ಪತ್ತೆಯಾದ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ನಾಶಗೊಳಿಸಲು ಸರ್ಕಾರ ಆದೇಶಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿಗೆ ಅಮೋಘ ಕೊಡುಗೆ ನೀಡಿದ್ದ ಬಿಪಿನ್ ರಾವತ್