ಚಂಡೀಗಢ : ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ಕೇಂದ್ರ ಸರ್ಕಾರ ಮುಂದಾದಾಗ ಕಾಂಗ್ರೆಸ್ ಅದಕ್ಕೆ ಅಡ್ಡಗಾಲು ಹಾಕುತ್ತಿರುವುದಕ್ಕೆ ಅಕ್ರಮ ವಲಸಿಗರು ನಿಮ್ಮ ಸೋದರ ಸಂಬಂಧಿಗಳೇ? ಎಂದು ಕೇಂದ್ರ ಸಚಿವ ಅಮಿತ್ ಶಾ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
ಗುರುಗ್ರಾಮದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಬಗ್ಗೆ ನಾವು ಮಾತನಾಡಿದಾಗಲೆಲ್ಲಾ ಕಾಂಗ್ರೆಸ್ ನವರು ಏಕೆ ಗಡೀಪಾರು ಮಾಡುತ್ತೀರಿ. ಅವರು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸುತ್ತಾರೆ. ಹಾಗಾದರೆ ಅಕ್ರಮ ವಲಸಿಗರು ನಿಮ್ಮ ಸೋದರ ಸಂಬಂಧಿಗಳೇ? ಎಂದು ಕಾಂಗ್ರೆಸ್ ನಾಯಕರನ್ನು ಕೇಳುವುದರ ಮೂಲಕ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಹಾಗೂ ಹರ್ಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಈ ಬಗ್ಗೆ ವಿರೋಧ ಮಾಡುತ್ತಾರೆ. ಆದರೆ ಯಾರೇ ವಿರೋಧ ಮಾಡಿದರೂ ಕೂಡ 2024ರ ಒಳಗೆ ಅಕ್ರಮ ವಲಸಿಗರನ್ನು ಭಾರತದಿಂದ ಹೊರ ಹಾಕುತ್ತೇವೆ ಎಂದು ಅವರು ಹೇಳಿದ್ದಾರೆ.