Publish Date: Mon, 01 Oct 2018 (08:33 IST)
Updated Date: Mon, 01 Oct 2018 (08:36 IST)
ನವದೆಹಲಿ : ಆರ್ಮಿ ಮೇಜರ್ ಒಬ್ಬ ಮನೆಕೆಲಸ ಮಾಡುವ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಇತ್ತ ಸಂತ್ರಸ್ತೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಮೇಜರ್ ಗೌರವ್ ಎಂಬಾತ ಮನೆಕೆಲಸದವಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ. ಈತ ಸಂತ್ರಸ್ತೆಯ ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಬಂದು ಆಕೆಯ ಮೇಲೆ ಹಲ್ಲೆ ಮಾಡಿ ರೂಮಿನೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.
ಈ ವಿಷಯ ತಿಳಿದ ಆಕೆಯ ಪತಿ ಮೇಜರ್ ಬಳಿ ಮಾತನಾಡಲು ಹೋದಾಗ ಆತನ ಮೇಲೆ ಹಲ್ಲೆ ಮಾಡಿ ಬೆದರಿಕೆ ಒಡ್ಡಿದ್ದಾನೆ. ಅಷ್ಟೇ ಅಲ್ಲದೇ ಅನೇಕ ಬಾರಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆ ತವರಿಗೆ ಹೋದಾಗ ಒಂದು ತಿಂಗಳು ನಂತರ ಆಕೆಗೆ ಕರೆ ಮಾಡಿ ಆಕೆಯ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾನೆ.
ಇದರಿಂದ ಸಂಶಯಗೊಂಡ ಸಂತ್ರಸ್ತೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಳ್ಳಲು ಮೇಜರ್ ಕಾರಣ ಎಂದು ಹಾಗೂ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮೇಜರ್ ವಿರುದ್ಧ ದೆಹಲಿ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಮಹಿಳೆ ನೀಡಿದ ದೂರಿನ್ವಯ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354 (ಕಿರುಕುಳ), 323 (ಹಾನಿ) ಮತ್ತು 506 (ಬೆದರಿಕೆ) ಅಡಿಯಲ್ಲಿ ಮೇಜರ್ ವಿರುದ್ಧ ಕೇಸು ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ