ಹರಿದ್ವಾರ : ಉತ್ತರಾಖಂಡದ ಹರಿದ್ವಾರದಲ್ಲಿ 6 ಮಂದಿ ಲೈಂಗಿಕ ಕಾರ್ಯಕರ್ತರು ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಪ್ರಯಾಣಿಕರು ಮತ್ತು ಪ್ರವಾಸಿಗರಿಗೆ ಆಮಿಷವೊಡ್ಡಿದ್ದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
6 ಮಂದಿ ಲೈಂಗಿಕ ಕಾರ್ಯಕರ್ತರು ಹಣ ಸಂಪಾದಿಸಲು ತಮ್ಮ ಜೊತೆ ಮಲಗುವಂತೆ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಾಡುವ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ಕಿರುಕುಳ ನೀಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
ತಕ್ಷಣ ಅಲ್ಲಿಗೆ ಬಂದ ಪೊಲೀಸರು ಆ ಮಹಿಳೆಯರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಆದರೆ ಕೋರ್ಟ್ ವೇಶ್ಯಾವಾಟಿಕೆ ಕಾನೂನಿನ ಪ್ರಕಾರ ಅಪರಾಧವಲ್ಲ, ಇದು ಮಹಿಳೆಯರ ವೃತ್ತಿ ಎಂದು ಅವರನ್ನು ಬಿಡುಗಡೆಗೊಳಿಸಿದೆ ಎನ್ನಲಾಗಿದೆ.