ಹೈದರಾಬಾದ್: ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಗೋದಾವರಿ ನದಿ ಹೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ.
2010 ರ ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಹೋರಾಟದ ನೇತೃತ್ವ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಮತ್ತು ಇತರ 15 ಮಂದಿಯನ್ನು ಆರೋಪಿಗಳೆಂದು ಗುರುತಿಸಿ ಮಹಾರಾಷ್ಟ್ರದ ನ್ಯಾಯಾಲಯವೊಂದು ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದು, ಕೋರ್ಟ್ ಗೆ ಹಾಜರಾಗಲು ತಿಳಿಸಿದೆ.
ಬಬ್ಲಿ ನೀರಾವರಿ ಯೋಜನೆ ಆಂಧ್ರಪ್ರದೇಶಕ್ಕೆ ಮಾರಕ ಎಂದು ಅಂದು ವಿಪಕ್ಷ ನಾಯಕರಾಗಿದ್ದ ಚಂದ್ರಬಾಬು ನಾಯ್ಡು ಮತ್ತು ಸಂಗಡಿಗರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿತ್ತು. ಇದೀಗ ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಸಿಎಂ ಚಂದ್ರಬಾಬು ನಾಯ್ಡುಗೆ ಕೋರ್ಟ್ ಅರೆಸ್ಟ್ ವಾರಂಟ್ ಜಾರಿಗೊಳಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.