ತ್ರಿವಳಿ ತಲಾಖ್ ವಿಧೇಯಕ ವಿಷಯದಲ್ಲಿ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ವಿಧೇಯಕಕ್ಕೆ ಬೆಂಬಲ ನೀಡಿದ್ದ ಕಾಂಗ್ರೆಸ್ ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತಪಡಿಸಲು ಯತ್ನಿಸುವ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ.
ಜಿಎಸ್‍ಟಿ ವಿಧೇಯಕದಂತೆ ಸಂಸತ್ತಿನ ಎರಡೂ ಸದನಗಳಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಒಮ್ಮತ ಮೂಡಿಸಬೇಕೆಂಬುದು ಸರ್ಕಾರದ ಇಚ್ಚೆಯಾಗಿದೆ. ಆದರೆ ಕಾಂಗೆಸ್ ದ್ವಿಮುಖ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.