Publish Date: Mon, 19 Aug 2019 (10:35 IST)
Updated Date: Mon, 19 Aug 2019 (10:37 IST)
ನವದೆಹಲಿ: ತೀವ್ರ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ವಿತ್ತ ಸಚಿವ, ಬಿಜೆಪಿ ನಾಯಕ ಅರುಣ್ ಜೇಟ್ಲಿ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ ಎನ್ನಲಾಗಿದೆ.
ಅರುಣ್ ಜೇಟ್ಲಿ ಜೀವರಕ್ಷಕ ಸಾಧನ ಅಳವಡಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ಹೇಳಿವೆ. ಆಗಸ್ಟ್ 9 ರಂದು ಜೇಟ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಈಗಾಗಲೇ ಅಮಿತ್ ಶಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು, ಇತರ ರಾಜಕೀಯ ನಾಯಕರು ಆಸ್ಪತ್ರೆಗೆ ಬಂದು ಜೇಟ್ಲಿ ಯೋಗ ಕ್ಷೇಮ ವಿಚಾರಿಸಿದ್ದಾರೆ. ಅವರ ಸ್ಥಿತಿ ಕಳವಳಕಾರಿಯಾಗಿದೆ ಎಂದು ತಿಳಿದುಬಂದಿದೆ.