Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಓವೈಸಿ ‌

Asaduddin Owaisi

Sampriya

ನವದೆಹಲಿ , ಶನಿವಾರ, 16 ಮಾರ್ಚ್ 2024 (14:32 IST)
ನವದೆಹಲಿ:  ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು  ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಅವರು ಇಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
 
ಈ ವೇಳೆ ಆರೋಪಿಸಿದ ಅವರು, 2019ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು ಅಂಕಿತ ಹಾಕಿದ್ದರು. ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ  ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದರು.
 
ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿ

 
ಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.
 
ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು, ಪೌರತ್ವ (ತಿದ್ದುಪಡಿ) ನಿಯಮಗಳು 2024 ಹೆಸರಿನ ಈ ನಿಯಮಗಳು, ಸಿಎಎ 2019 ಕಾಯ್ದೆಯ ಪ್ರಕಾರ ಅರ್ಹರಾದವರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಪಿಸಲಿವೆ ಎಂದು  ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಯದುವೀರ ವಿಚಾರದಲ್ಲಿ ಎಚ್ಚರ ವಹಿಸಿ: ಕೈ ನಾಯಕರಿಗೆ ಸಿದ್ದರಾಮಯ್ಯ ಕಿವಿಮಾತು