ಚೆನ್ನೈ : ಸಹಾಯಕ ಚಲನಚಿತ್ರ ನಿರ್ದೇಶಕಿಯೊಬ್ಬರು ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಕಾರನ್ನು ನಿಲ್ಲಿಸಿದ್ದಕ್ಕೆ ಆತನನ್ನು ನಿಂದಿಸಿ ಹಲ್ಲೆ ಮಾಡಿದ ಘಟನೆ ಚೆನ್ನೈ ನಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕಾಮಿನಿ(28) ಇಂತಹ ಕೃತ್ಯ ಎಸಗಿದ ಸಹಾಯಕ ಚಲನಚಿತ್ರ ನಿರ್ದೇಶಕಿ. ಇವರು ಮದ್ಯಪಾನ ಮಾಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾರಣ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಅವರ ಕಾರನ್ನು ತಡೆದಿದ್ದಾರೆ. ಇದರಿಂದ ಕೋಪಗೊಂಡ ಆಕೆ ಸಿಬ್ಬಂದಿಯನ್ನು ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಸಹಾಯಕ ಚಲನಚಿತ್ರ ನಿರ್ದೇಶಕಿ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.