ಗುಜರಾತ್‌ನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯವಾದ ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಚುನಾವಣೆ ಕಣಕ್ಕಿಳಿಯುತ್ತಿರುವುದು ಬಿಜೆಪಿ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ರೋಡ್ ಶೋ ನಡೆಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದ್ದು, ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೇತೃತ್ವ ವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಗಿ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಸ್ಮರಿಸಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.