Publish Date: Fri, 02 Oct 2020 (15:29 IST)
Updated Date: Fri, 02 Oct 2020 (15:31 IST)
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರ ನಡೆಸಿರುವ ದೌರ್ಜನ್ಯಕ್ಕೆ ದೇಶಾದ್ಯಂತ ವ್ಯಾಪಕ ಆಕ್ರೋಶ ಸ್ಫೋಟಗೊಳ್ಳತೊಡಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಿವಿಧ ಪಕ್ಷಗಳ ನಾಯಕರು ಕಿಡಿಕಾರುತ್ತಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮೊದಲಾದವರು ಆಕ್ರೋಶ ಹೊರಹಾಕಿದ್ದಾರೆ.
ಈ ನಡುವೆ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದರಿಂದ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಬೇಕೆಂದು ಗಾಜಿಯಾಬಾದ್ ನಲ್ಲಿನ ವಕೀಲರು ಬಲವಾದ ಒತ್ತಾಯ ಮಾಡಿದ್ದಾರೆ.