ನವದೆಹಲಿ : ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ದಾಳಿ ಮಾಡಿದೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಮೇ 30 ರಂದು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ ಇಡಿ ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಇಡಿ ಜಪ್ತಿ ಮಾಡಿತ್ತು.
ಆ ಬಳಿಕ ಇದೀಗ ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ಆಧಾರದ ಮೇಲೆ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.