ನವದೆಹಲಿ : ಆಗಸ್ಟ್ ತಿಂಗಳಿನಲ್ಲಿ 1,43,612 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ ಶೇ. 28ರಷ್ಟು ಏರಿಕೆಯಾಗಿದೆ. ಕಳೆದ ಆಗಸ್ಟ್ನಲ್ಲಿ 1,12,020 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿತ್ತು. ಸತತ 6ನೇ ಬಾರಿಗೆ ಜಿಎಸ್ಟಿ ಸಂಗ್ರಹ 1.40 ಲಕ್ಷ ಕೋಟಿ ರೂ. ಗಡಿ ದಾಟುತ್ತಿದೆ.
ಜುಲೈನಲ್ಲಿ ಸಂಗ್ರಹವಾದ ಜಿಎಸ್ಟಿಗೆ ಹೋಲಿಸಿದರೆ ಆಗಸ್ಟ್ ಜಿಎಸ್ಟಿ ಸಂಗ್ರಹ ಶೇ. 4ರಷ್ಟು ಕಡಿಮೆಯಾಗಿದೆ. ಜುಲೈನಲ್ಲಿ 1,48,995 ಕೋಟಿ ರೂ. ಜಿಎಸ್ಟಿ ಆದಾಯ ಸಂಗ್ರಹವಾಗಿತ್ತು.
ಒಟ್ಟು ಜಿಎಸ್ಟಿ ಸಂಗ್ರಹದಲ್ಲಿ ಕೇಂದ್ರ ಜಿಎಸ್ಟಿ ಪಾಲು 24,710 ಕೋಟಿ ರೂ.ಗಳಾಗಿದ್ದರೆ, ರಾಜ್ಯ ಜಿಎಸ್ಟಿ 30,951 ಕೋಟಿ ರೂ. ಆಗಿದೆ. ಇಂಟಿಗ್ರೇಟೆಡ್ ಜಿಎಸ್ಟಿ(ಭಾರತಕ್ಕೆ ಆಮದು ಮಾಡಿಕೊಳ್ಳುವ ಮತ್ತು ಭಾರತದಿಂದ ರಫ್ತು ಮಾಡುವ ಸಂದರ್ಭಗಳಲ್ಲಿ ಸರಕು ಮೇಲೆ ಹಾಕುವ ತೆರಿಗೆ) 77,782 ಕೋಟಿ ರೂ.ಗಳಾಗಿವೆ. ಇದರಲ್ಲಿ 10,168 ಕೋಟಿ ರೂ. ಸೆಸ್ ಕೂಡ ಸೇರಿದೆ.