ಮಹಾರಾಷ್ಟ್ರ : 26 ವರ್ಷದ ಆಟೋರಿಕ್ಷಾ ಚಾಲಕನೊಬ್ಬ 18 ವರ್ಷದ ಪ್ರವಾಸಿ ಯುವತಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಹಾರಾಷ್ಟ್ರದ ರಾಯ್ಗಡ್ ಜಿಲ್ಲೆಯ ಪನ್ವೆಲ್ ಬಳಿಯ ಹಳ್ಳಿಯಲ್ಲಿ ನಡೆದಿದೆ.
ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಿಸಲು ಆಕೆ ಮುಂಬೈಗೆ ಭೇಟಿ ನೀಡಿದ್ದಳು. ಆ ವೇಳೆ ಅವಳು ಗಾಂಧಿ ಗಾರ್ಡನ್ ಪ್ರದೇಶಕ್ಕೆ ಹೋಗಲು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆಯ ತಲೆಗೆ ಕಲ್ಲಿನಿಂದ ಹೊಡೆಯುವುದಾಗಿ ಬೆದರಿಕೆ ಹಾಕಿ ಮಾನಭಂಗ ಎಸಗಿದ್ದಾನೆ.
ಈ ಬಗ್ಗೆ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ.