ಅನಾರೋಗ್ಯಕ್ಕೀಡಾಗಿ ಕಳೆದೊಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯ ವಿಚಾರಿಸಲು ಇಂದು ಪ್ರಧಾನಿ ಮೋದಿ ಚೆನ್ನೈಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾಥ್ ನೀಡಲಿದ್ದಾರೆ.
ಕಳೆದ ವಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಭಾನುವಾರ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಹಿರಿಯ ಪುತ್ರಿ ಐಶ್ವರ್ಯಾ ಜತೆ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ್ದಾರೆ. ತಂದೆ- ಮಗಳು ಸುಮಾರು 20 ರಿಂದ 25 ನಿಮಿಷಗಳ ಕಾಲ ಆಸ್ಪತ್ರೆಯಲ್ಲಿದ್ದರು ಎಂದು ಮೂಲಗಳು ತಿಳಿಸಿವೆ
ಜ್ವರ ಹಾಗೂ ನಿರ್ಜಲೀಕರಣದಿಂದ ಬಳಲುತ್ತಿದ್ದ ಜಯಲಲಿತಾ ಸೆಪ್ಟೆಂಬರ್ 22ರಂದು ನಗರದಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಲಾಗಿದ್ದು ಲಂಡನ್ನ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಜಯಾ ಆರೋಗ್ಯ ಸುಧಾರಿಸಿದ್ದು ಅವರು ಹಣ್ಣನ್ನು ಸೇವಿಸಿದ್ದಾರೆ ಎಂದು ಸಹ ಕೆಲ ಮಾಧ್ಯಮಗಳು ವರದಿ ಮಾಡಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ