ನವದೆಹಲಿ: ಇಡೀ ದೇಶವೇ ಕಾಯುತ್ತಿರುವ ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದ ತೀರ್ಪು ಇಂದು ಸುಪ್ರೀಂಕೋರ್ಟ್ ನೀಡಲಿದೆ. ಇದಕ್ಕಾಗಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಅಯೋಧ್ಯೆ ತೀರ್ಪಿನ ಹಿನ್ನಲೆಯಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಕೋಮುಸೌಹಾರ್ದತೆಗೆ ಧಕ್ಕೆಯಾಗುವಂತಹ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ತೀರ್ಪಿನ ಹಿನ್ನಲೆಯಲ್ಲಿ ಮುನ್ನಚ್ಚರಿಕೆಯ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದು ವಾಹನ ಸಂಚಾಠವೂ ವಿರಳವಾಗಿದೆ. ಒಂದು ರೀತಿಯ ಬಂದ್ ವಾತಾವರಣ ಎಲ್ಲೆಡೆ ಮನೆ ಮಾಡಿದೆ. ಇಂದು ಬೆಳಿಗ್ಗೆ 10.30 ರ ಸುಮಾರಿಗೆ ತೀರ್ಪು ಹೊರಬರಲಿದೆ.