ಅಯೋಧ್ಯೆ: ದೇಶವೇ ಎದಿರು ನೋಡುತ್ತಿರುವಂತಹ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಲಿದೆ.
ಪ್ರಧಾನಿ ಮೋದಿ ಯಜಮಾನನ ಸ್ಥಾನದಲ್ಲಿ ಕುಳಿತು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಡಲಿದ್ದಾರೆ. ಕಳೆದ ಐದು ದಿನಗಳಿಂದ ಪ್ರಾಣ ಪ್ರತಿಷ್ಠಾ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ಇಂದು ಗರ್ಭಗುಡಿಗೆ ಪ್ರಧಾನಿ ಮೋದಿ ಸೇರಿದಂತೆ ಐವರಿಗೆ ಮಾತ್ರ ಪ್ರವೇಶ ಸಿಗಲಿದೆ.
ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯೊಳಗೆ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಗಳು ನೆರವೇರಲಿವೆ. ಈ ಸಂದರ್ಭದಲ್ಲಿ ಸಾವಿರಾರು ಗಣ್ಯರು, ಆಹ್ವಾನಿತರು ಪಾಲ್ಗೊಳ್ಳಲಿದ್ದಾರೆ.
ಇದರ ಹೊರತಾಗಿ ಸಾರ್ವಜನಿಕರು ಲೈವ್ ಆಗಿ ಇಂದಿನ ಐತಿಹಾಸಿಕ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ. ದೂರದರ್ಶನ ವಾಹಿನಿ ಮತ್ತು ವಿವಿಧ ಸುದ್ದಿ ವಾಹಿನಿಗಳಲ್ಲಿ ನೇರಪ್ರಸಾರವಿರಲಿದೆ. ಈ ಮೂಲಕ ಮನೆಯಲ್ಲಿಯೇ ಕುಳಿತು ಸಾರ್ವಜನಿಕರೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಬಹುದು.