ನವದೆಹಲಿ : ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅರುಣ್ ಜೇಟ್ಲಿ, ಶುಕ್ರವಾರ ಸಂಜೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು, ಆದರೆ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.
ಅರುಣ್ ಜೇಟ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾಹಿತಿ ತಿಳಿದು ಏಮ್ಸ್ ಆಸ್ಪತ್ರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವಾರು ನಾಯಕರು ಆಗಮಿಸಿ ವೈದ್ಯರೊಂದಿಗೆ ಚರ್ಚೆ ನಡೆಸಿ ಅರುಣ್ ಜೇಟ್ಲಿ ಆರೋಗ್ಯದ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.