ಡೆಹ್ರಾಡೂನ್ : ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮಧ್ಯರಾತ್ರಿ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದ ಪ್ರೊಫೆಸರ್, ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಆಗಿ ಜವಬ್ದಾರಿ ವಹಿಸಿಕೊಂಡಿದ್ದು, ಮಧ್ಯರಾತ್ರಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿ ಪತ್ನಿ ಮನೆಯಲ್ಲಿ ಇಲ್ಲ ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಕಳುಹಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಪ್ರೊಫೆಸರ್ ವಿರುದ್ಧ ವಿಸಿಗೆ ದೂರು ನೀಡಿದ್ದಾಳೆ.
ಮೇಸೆಜ್ ಫೋಟೋಗಳನ್ನು ವಿದ್ಯಾರ್ಥಿನಿ ಸಾಕ್ಷಿಯಾಗಿ ನೀಡಿದ ಹಿನ್ನಲೆಯಲ್ಲಿ ಆತನನ್ನು ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅಲ್ಲದೇ ಈ ಘಟನೆಗೆ ಸಂಬಂಧಿಸಿದಂತೆ ಪ್ರೊಫೆಸರ್ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯಪಾಲರು ಸೂಚಿಸಿದ್ದಾರೆ ಎನ್ನಲಾಗಿದೆ.