ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾಗೆ ಭಾರತ್ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಆದೇಶ ನೀಡಬೇಕು ಎನ್ನುವ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ.
ಭಾರತದ ಅತ್ಯುನ್ನತ ನಾಗರಿಕ ಭಾರತ್ ರತ್ನ ಪ್ರಶಸ್ತಿಯನ್ನು ಅಮ್ಮ ಅವರಿಗೆ ನೀಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿ ಎನ್ನುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಎಂ.ಸುಂದರ್ ನೇತೃತ್ವದ ನ್ಯಾಯಪೀಠ ತಳ್ಳಿಹಾಕಿದೆ.
ಮದ್ರಾಸ್ ಹೈಕೋರ್ಟ್‌ನಲ್ಲಿ ಕೆ.ಕೆ.ರಮೇಶ್ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಭಾರತ ರತ್ನ ಪಶಸ್ತಿಗಾಗಿ ಕೇಂದ್ರ ಸರಕಾರ ಸಮಿತಿಯನ್ನು ರಚಿಸಿದ್ದರಿಂದ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಅರ್ಜಿದಾರರಾದ ರಮೇಶ್, ಜಯಲಲಿತಾ ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ಜನಪರ ಯೋಜನೆಗಳನ್ನು ಹಮ್ಮಿಕೊಂಡಿದ್ದರು. ಆದ್ದರಿಂದ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದು ಸೂಕ್ತ ಎಂದು ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.