Webdunia - Bharat's app for daily news and videos

Install App

ಮದುವೆಯಾದ ತಿಂಗಳಲ್ಲೇ 4 ತಿಂಗಳ ಗರ್ಭಿಣಿ! ಏನಿದು ಘಟನೆ?

Webdunia
ಶನಿವಾರ, 25 ಜೂನ್ 2022 (10:14 IST)
ಲಕ್ನೋ : ಮದುವೆಯಾಗಿ ಕೇವಲ ಒಂದೂವರೆ ತಿಂಗಳಷ್ಟೇ ಆಗಿದೆ. ಆದರೆ ನವವಿವಾಹಿತೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿದ ಪತಿ ಮತ್ತು ಅತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ಗಂಜ್ನಲ್ಲಿ ನಡೆದಿದೆ.

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನವವಿವಾಹಿತೆಗೆ ಸೋನೋಗ್ರಫಿ ಮಾಡಲಾಯಿತು. ಈ ವೇಳೆ ಗರ್ಭಿಣಿಯಾಗಿರುವ ವಿಚಾರ ತಿಳಿದ ಅತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ್ದಾರೆ.

ಇದೀಗ ಪತ್ನಿ ವಿರುದ್ಧ ಆಕೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಒಂದೂವರೆ ತಿಂಗಳ ಹಿಂದೆ ಗ್ರಾಮದ ಸಂಬಂಧಿಯೊಬ್ಬರ ಮೂಲಕ ಪಕ್ಕದ ಜಿಲ್ಲೆಯ ಹುಡುಗಿಯನ್ನು ಮದುವೆಯಾಗಿರುವುದಾಗಿ ತಿಳಿಸಿದ್ದಾರೆ. ಆದರೆ ಮದುವೆಯಾದ ಒಂದು ತಿಂಗಳಿನಲ್ಲಿಯೇ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿದು ವಂಚನೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. 

ಮಗಳು ಗರ್ಭಿಣಿಯಾಗಿರುವ ವಿಚಾರ ಮೊದಲೇ ಆಕೆಯ ಕುಟುಂಬಸ್ಥರಿಗೆ ತಿಳಿದಿತ್ತು. ಆದರೂ ಈ ವಿಚಾರವನ್ನು ಮರೆ ಮಾಚಿ ಮದುವೆ ಮಾಡಿದ್ದಾರೆ ಎಂದು ನವವಿವಾಹಿತೆ ಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
v

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments