Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಶಿಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

ರಾಹುಲ್ ಗಾಂಧಿಗೆ ಬಿಗ್ ರಿಲೀಫ್ : ಶಿಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
ದೆಹಲಿ , ಶನಿವಾರ, 5 ಆಗಸ್ಟ್ 2023 (09:42 IST)
ದೆಹಲಿ :  ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಿಕ್ಷೆಗೆ ಮಧ್ಯಂತರ ತಡೆ ನೀಡಿದೆ.
 
ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಎಲ್ಲ ಕಳ್ಳರ ಸರ್ನೇಮ್ ಮೋದಿ ಎಂದೇ ಯಾಕಿದೆ? ಎಂದು ಕೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಮೋದಿ ಹೆಸರಿರುವವರನ್ನು ಅವಮಾನಿಸಿದ್ದಾರೆ ಎಂದು ಪೂರ್ಣೇಶ್ ಮೋದಿ ದೂರಿದ್ದರು.

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಸಂಜಯ್ ಕುಮಾರ್ ಇರುವ ನ್ಯಾಯಮೂರ್ತಿ ಬಿ.ಆರ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಪ್ರಸ್ತುತ ಅರ್ಜಿ ವಿಚಾರಣೆ ನಡೆಸಿದ್ದು, ರಾಹುಲ್ ಗಾಂಧಿಗೆ ಗರಿಷ್ಠ ಎರಡು ವರ್ಷಗಳು ಅದಕ್ಕಿಂತ ಒಂದು ದಿನವೂ ಕಮ್ಮಿ ಎಲ್ಲ ಎಂಬಂತೆ ಶಿಕ್ಷೆ ವಿಧಿಸಲು ಯಾವುದೇ ಕಾರಣವನ್ನು ನೀಡಿಲ್ಲ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಡಿತರ ಕಾರ್ಡ್ ವಿತರಣೆಗೆ ಕಾರ್ಯಾರಂಭ, ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ : ಕೆಎಚ್ ಮುನಿಯಪ್ಪ