ನವದೆಹಲಿ : ಐಟಿ ಕಾರಿಡಾರ್ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಸದ್ಯಕ್ಕೆ ಬಿ.ಎಸ್ ಯಡಿಯೂರಪ್ಪ ವಿರುದ್ಧ ತನಿಖೆ ಮಾಡದಂತೆ ಸೂಚಿಸಿದೆ.
ತಮ್ಮ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿ.ಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.