ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಬಿಜೆಪಿ ಗೆಲುವು ಬಹುತೇಕ ಖಚಿತ ಎಂದು ಮತಗಟ್ಟೆ ಸಮೀಕ್ಷೆಗಳು ಬಹಿರಂಗಪಡಿಸಿವೆ.
ಪ್ರಧಾನಿ ತವರು ಗುಜರಾತ್ ನಲ್ಲಿ ಈ ಬಾರಿ ಬಿಜೆಪಿ ಗೆಲುವು ಕಷ್ಟ, ಕಾಂಗ್ರೆಸ್ ಪೈಪೋಟಿ ಒಡ್ಡಲಿದೆ ಎಂದೇ ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಮತಗಟ್ಟೆ ಸಮೀಕ್ಷೆಗಳು ಬಿಜೆಪಿ ಏಕಾಂಗಿಯಾಗಿ ಗೆಲ್ಲಲಿದೆ ಎಂದೇ ಲೆಕ್ಕಾಚಾರ ಹಾಕಿದೆ.
ಡಿಸೆಂಬರ್ 18 ರಂದು ಚುನಾವಣಾ ಫಲಿತಾಂಶ ಹೊರಬರಲಿದ್ದು, ಅಲ್ಲಿಯವರೆಗೆ ಮತದಾರರು, ರಾಜಕೀಯ ಪಕ್ಷಗಳು ಕುತೂಹಲದಿಂದ ಎದುರು ನೋಡಲಿದ್ದಾರೆ. ಆದರೆ ಗುಜರಾತ್ ನಲ್ಲಿ ಶತಾಯ ಗತಾಯ ಗೆಲ್ಲಲು ಬಯಸಿದ ಕಾಂಗ್ರೆಸ್ ಗೆ ಈ ಸುದ್ದಿ ಕಹಿ ಎನಿಸುವುದಂತೂ ಸಹಜ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ