Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮತ ಎಣಿಕೆ ಪ್ರಾರಂಭವಾಗಿದ್ದು, ಅತ್ತ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಎದೆಯೊಳಗೆ ಆತಂಕ ಶುರುವಾಗಿದೆ. ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.
ರಾಹುಲ್ ಗಾಂಧಿ ಅಧ್ಯಕ್ಷರಾದ ಬೆನ್ನಲ್ಲೇ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಇನ್ನೊಂದಿಲ್ಲ. ಇತ್ತ ಬಿಜೆಪಿಗೆ ಪ್ರಧಾನಿ ಮೋದಿ ತವರಲ್ಲೇ ಸೋಲಿನ ಅನುಭವಾದರೆ ಮುಖಭಂಗವಾಗಲಿದೆ.
ಹೀಗಾಗಿ ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ದೇಶದ ಜನರ ದೃಷ್ಟಿ ನೆಟ್ಟಿದೆ. ಆರಂಭದಲ್ಲಿ ಬಿಜೆಪಿ ಎರಡೂ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದರೂ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕೂಡಾ ತೀರಾ ಹಿಂದೆ ಬಿದ್ದಿಲ್ಲ. ಇನ್ನೂ ಒಂದೆರಡು ಗಂಟೆಗಳಲ್ಲಿ ಸ್ಪಷ್ಟ ಫಲಿತಾಂಶ ತಿಳಿಯಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ