ನವದೆಹಲಿ : ಹಿಂದಿ, ಹಿಂದೂ ಹಿಂದುತ್ವದ ಸಿದ್ಧಾಂತದ ಮೇಲೆ ಆರೋಪ ಮಾಡಿದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧ ಬಿಜೆಪಿ ಹಾಗೂ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದಿ ಮಾತನಾಡಲು ಬರಲಿಲ್ಲವೆಂದು ಮುಂಬೈ ವಿಮಾನ ನಿಲ್ದಾಣದ ಇಮೆಗ್ರೇಶನ್ ಕೌಂಟರ್ ಅಧಿಕಾರಿಯೊಬ್ಬ ತಮಿಳುನಾಡು ವಿದ್ಯಾರ್ಥಿಗೆ ಅವಮಾನ ಮಾಡಿದ್ದ. ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ ಶಶಿ ತರೂರ್ ಅವರು,’ ಹಿಂದಿ, ಹಿಂದೂ, ಹಿಂದುತ್ವದ ಸಿದ್ಧಾಂತವು ದೇಶವನ್ನೇ ವಿಭಸುತ್ತಿದೆ. ನಮಗೆ ಏಕತೆ ಬೇಕೇ ಹೊರತು ಏಕರೂಪವಲ್ಲ’ ಎಂದು ಬರೆದುಕೊಂಡಿದ್ದರು.
ಶಶಿ ತರೂರ್ ಅವರ ಈ ಟ್ವೀಟ್ ಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕ ಸಂಬಿತ್ ಪಾತ್ರಾ, ‘ಹಿಂದುತ್ವ ದೇಶವನ್ನು ಒಗ್ಗೂಡಿಸಲು ಶ್ರಮಿಸುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ಹಿಂದುತ್ವವನ್ನು ವಿರೋಧಿಸುತ್ತಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರೇರಣೆ ನೀಡುತ್ತಿದ್ದಾರೆ’ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.