ಕೋವಿಡ್ – 19 ತಡೆಗಾಗಿ ಬಿಜೆಪಿ ನೇತೃತ್ವದ ಸರಕಾರ ಹೋರಾಟ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಧ್ಯಕ್ಷರಿಗೆ ವೈರಸ್ ತಗುಲಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ – 19 ತಗುಲಿರುವುದು ದೃಢಪಟ್ಟಿದೆ.
ನಾನು
#COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.