ಬಿಜೆಪಿ ಮುಖಂಡ ಸುಪ್ರಬಾತ್ ಈ ಹಿಂದೆ ಟಿಎಂಸಿಯಲ್ಲಿದಿದ್ದರು. ನಂತರ ಕಳೆದ ಐದು ತಿಂಗಳ ಹಿಂದೆಯಷ್ಟೇ ಭಾರತೀಯ ಜನತಾ ಪಕ್ಷ ಸೇರಿಕೊಂಡಿದ್ದರು. ಆದರೆ ಅವರು ಮನೆಯಲ್ಲಿಲ್ಲದ ವೇಳೆ ಬೆಳಗ್ಗೆ 8ಗಂಟೆಗೆ ಕೆಲ ದುಷ್ಕರ್ಮಿಗಳು ಬಾಗಿಲು ಒಡೆದು ಮನೆಯೊಳಗೆ ನುಗ್ಗಿ ಮನೆಯಲ್ಲಿದ್ದವರಿಗೆ ಬಂದೂಕಿನಿಂದ ಬೆದರಿಸಿ ಮುಖಂಡನ 22 ವರ್ಷದ ಮಗಳನ್ನ ಕಿಡ್ನಾಪ್ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಈ ಘಟನೆಯ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಕಂಡು ಬರುತ್ತಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ