ಮುಂಬೈ : ಮಹಾರಾಷ್ಟ್ರದ ಬಿಜೆಪಿ ನಾಯಕ ಗೋಪಿಚಂದ್ ಪಡಾಲ್ಕರ್ ಎನ್ ಸಿಪಿ ನಾಯಕ ಶರದ್ ಪವಾರ್ ಅವರನ್ನು ಕೊರೊನಾ ವೈರಸ್ ಗೆ ಹೋಲಿಸಿ ವಿವಾದಕ್ಕೀಡಾಗಿದ್ದಾರೆ.
ಪಂಡಾರಾಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೋಪಿಚಂದ್ ಪಡಾಲ್ಕರ್ , ಎನ್ ಸಿಪಿ ನಾಯಕ ಶರದ್ ಪವಾರ್ ಮಹಾರಾಷ್ಟ್ರದ ಕೊರೊನಾ ವೈರಸ್ ಸೋಂಕು ಎಂದು ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದ್ದು, ಎನ್ ಸಿಪಿ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ಗೋಪಿಚಂದ್ ಪಡಾಲ್ಕರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.