ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆಂದು ಹಣ ಸಂಗ್ರಹಿಸುತ್ತಿರುವ ಬಿಜೆಪಿ ನಾಯಕರು ಸಿಕ್ಕಿದ ದುಡ್ಡಲ್ಲಿ ಹೆಂಡ ಖರೀದಿಸುತ್ತಿದ್ದಾರೆ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಕಾಂತಿಲಾಲ್ ಭೂರಿಯಾ ವಿವಾದಿತ ಹೇಳಿಕೆ ನೀಡಿದ್ದಾರೆ.
ಹಗಲು ರಾಮಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸುವ ಬಿಜೆಪಿ ನಾಯಕರು ರಾತ್ರಿ ಅದೇ ಹಣದಲ್ಲಿ ಅಲ್ಕೋಹಾಲ್ ಖರೀದಿಸಿ ಮಜಾ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಕಾಂತಿಲಾಲ್ ಹೇಳಿದ್ದಾರೆ. ಇದು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.