Webdunia - Bharat's app for daily news and videos

Install App

ಸಭೆಯಲ್ಲಿ ಚಪ್ಪಲಿ ಹಿಡಿದು ಹೊಡೆದಾಡಿಕೊಂಡ ಬಿಜೆಪಿ ನಾಯಕರು

Webdunia
ಗುರುವಾರ, 7 ಮಾರ್ಚ್ 2019 (07:08 IST)
ಲಕ್ನೋ : ಸಭೆಯೊಂದರಲ್ಲಿ  ಉತ್ತರಪ್ರದೇಶದ ಬಿಜೆಪಿ ಸಂಸದ ಮತ್ತು ಶಾಸಕರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದು,ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ನಿನ್ನೆ ವಿವಿಧ ಯೋಜನೆ ಸಂಬಂಧ ಸಭೆಯನ್ನು ಆಯೋಜಿಸಿಲಾಗಿತ್ತು. ಈ ಸಭೆಗೆ ರಾಜಕೀಯ ನಾಯಕರುಗಳು ಹಾಗೂ ಮಾಧ್ಯಮದವರು ಆಗಮಿಸಿದ್ದರು. ಆ ವೇಳೆ ಸಂಸದ ಶರದ್ ತ್ರಿಪಾಠಿ, ನಾನು ಈ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ಶಂಕುಸ್ಥಾಪನಾ ಸಮಾರಂಭದ ವೇಳೆ ನನ್ನ ಹೆಸರನ್ನು ಕೈ ಬಿಟ್ಟಿದ್ದು ಯಾಕೆ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಶಾಸಕ ರಾಕೇಶ್ ಸಿಂಗ್ ಬಘೇಲ್ ಇದು ನನ್ನ ನಿರ್ಧಾರ ಎಂದು ಹೇಳಿದ್ದಾರೆ.


ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಇದು ವಿಕೋಪಕ್ಕೆ ತಿರುಗಿ ಶರದ್ ತ್ರಿಪಾಠಿ  ಚಪ್ಪಲಿ ತೆಗೆದುಕೊಂಡು ಬಘೇಲ್ ಗೆ ಹೊಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಬಘೇಲ್ ಅವರು  ತ್ರಿಪಾಠಿ ಕುಳಿತ್ತಿದ್ದ ಸ್ಥಳಕ್ಕೆ ತೆರಳಿ ಹೊಡೆದಿದ್ದಾರೆ.


ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಎಂಎನ್ ಪಾಂಡೆ ಪ್ರತಿಕ್ರಿಯಿಸಿ, ಇದು ನಿಜಕ್ಕೂ ಖಂಡನೀಯ. ಇಬ್ಬರನ್ನು ಲಕ್ನೋ ಬರುವಂತೆ ಸಮನ್ಸ್ ಜಾರಿ ಮಾಡಲಾಗಿದ್ದು, ಶಿಸ್ತು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments