ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರು ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಸಂಭ್ರಮಾಚರಣೆಯ ಅಂಗವಾಗಿ ಬಿಜೆಪಿ ದೇಶದ 900 ನಗರಗಳಲ್ಲಿ ಮೋದಿ ಫೆಸ್ಟ್ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದೆ.
ಮೇ 26ರಿಂದ ಜೂನ್ 15 ವರೆಗೆ ದೇಶದಾದ್ಯಂತ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷದ 450 ನಾಯಕರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಈ ಪ್ರಚಾರ ಕಾರ್ಯಕ್ರಮವು ಮೇ 26ರಿಂದ ಆರಂಭವಾಗಿ ಜೂನ್ 15ಕ್ಕೆ ಮುಗಿಯಲಿದೆ ಎಂದಿದ್ದಾರೆ. ಗುವಾಹಟಿಯಲ್ಲಿ ಮೇ. 26ರಂದು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮೋದಿ ಸರ್ಕಾರದ ಸಾಧನೆ ಮತ್ತು ಯೋಜನೆಗಳ ಬಗ್ಗೆ ದೇಶದ ಜನರಿಗೆ ಮಾಹಿತಿ ನೀಡುವುದಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.