ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಗೆದ್ದವರು ಯಾರೋ? ಆಮೇಲೆ ಅಧ್ಯಕ್ಷರಾದವರು ಯಾರೋ? ನಮ್ಮ ಕಡೆಯವರನ್ನು ಅಧ್ಯಕ್ಷರನ್ನಾಗಿ ಮಾಡಲು ಕಿತ್ತಾಡುತ್ತಿದ್ದಾರೆ. ಎಲೆಕ್ಷನ್ ಮಾಡುತ್ತಾರೆ ಆಮೇಲೆ ಫ್ರಾಡ್ ಅಂತಾರೆ. ಈಗ ಫಿಫ್ಟಿ ಫಿಫ್ಟಿ ಅಂತಾರೆ ಎಂದು ಲೇವಡಿ ಮಾಡಿದರು.
ಜೆಡಿಎಸ್ ನಲ್ಲಿ ಮೊಮ್ಮಕ್ಕಳು ಆದವರಿಗಷ್ಟೇ ಯುವ ಘಟಕದ ಅಧ್ಯಕ್ಷ ಸ್ಥಾನ ಕೊಡುತ್ತಾರೆ ಎಂದು ತೇಜಸ್ವಿ ಸೂರ್ಯ ಎರಡು ರಾಷ್ಟ್ರೀಯ ಪಕ್ಷಗಳನ್ನು ಲೇವಡಿ ಮಾಡಿದರು.
ಇದೇ ವೇಳೆ ದಲಿತ ಮುಖ್ಯಮಂತ್ರಿ ಸ್ಥಾನದ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನಮ್ಮಲ್ಲಿ ಈಗಾಗಲೇ ಒಬ್ಬರು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಈ ಬಗ್ಗೆ ಚರ್ಚೆ ಬರುವುದಿಲ್ಲ ಎಂದರು.