ದೇಶಾದ್ಯಂತ ನೋಟು ನಿಷೇಧ ಜಾರಿಗೊಳಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಸದಸ್ಯರು ಸನ್ಮಾನಿಸಿದ್ದಾರೆ.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಎನ್‌ಡಿಎಂಸಿ ಕನ್ವೆನ್ಶನ್ ಸೆಂಟರ್‌ನಲ್ಲಿ ಆರಂಭವಾಗಿದೆ.
ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಲ್ಲಾ ರಾಜ್ಯಗಳ ಬಿಜೆಪಿ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿಯವರ ಲಕ್ನೋ ಸಾರ್ವಜನಿಕ ಸಭೆಯಲ್ಲಿ ಲಕ್ಷಾಂತರ ಜನ ಸೇರ್ಪಡೆಗೊಂಡಿದ್ದರಿಂದ ಉತ್ತೇಜಿತಗೊಂಡಿರುವ ಬಿಜೆಪಿ ನಾಯಕರು, ವಿಪಕ್ಷಗಳು ಭ್ರಷ್ಟರನ್ನು ರಕ್ಷಿಸುತ್ತಿವೆ ಎನ್ನುವ ಅಂಶವನ್ನು ಸಾರುವುದೇ ಸಭೆಯ ಮುಖ್ಯ ಉದ್ದೇಶವಾಗಿದೆ ಎನ್ನಲಾಗಿದೆ.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಂದು ರಾಜಕೀಯ ಮತ್ತೊಂದು ಆರ್ಥಿಕ ನಿರ್ಣಯವನ್ನು ಮಂಡಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಐದು ರಾಜ್ಯಗಳ ಚುನಾವಣೆ ಅಭ್ಯರ್ಥಿಗಳ ಪಟ್ಟಿಯನ್ನು ಸಂಕ್ರಾಂತಿ ಹಬ್ಬ(ಜ.14 ರಂದು)ದಂದು ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.