Publish Date: Fri, 02 Oct 2020 (23:48 IST)
Updated Date: Fri, 02 Oct 2020 (23:50 IST)
ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜನ ಖರ್ಗೆ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಹಾಗೂ ದಿ. ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ದುಷ್ಟರ ಕೈಯಲ್ಲಿ ಅಧಿಕಾರ ಇದೆ ಎಂದ ಮಲ್ಲಿಕಾರ್ಜುನ ಖರ್ಗೆ, ಜೈ ಜವಾನ್, ಜೈ ಕಿಸಾನ್ ಅನ್ನೋದು ಮರೆಯಾಗಿ ಮಾರೋ ಕಿಸಾನ್, ಮಾರೋ ಜವಾನ್ ಆರಂಭವಾಗಿದೆ ಎಂದು ದೂರಿದ್ದಾರೆ.
ರೈತ ವಿರೋಧಿ ಕಾನೂನುಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ ಎಂದು ಆಕ್ರೋಶ ಹೊರಹಾಕಿದರು. ಇದೇ ವೇಳೆ, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.